ಕರ್ನಾಟಕ ಬಂದ್ : ರಾಜ್ಯದೆಲ್ಲೆಡೆ ಪ್ರತಿಭಟನೆ, ಬಸ್ ಸಂಚಾರ ಸ್ಥಗಿತ

ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಜೋಡೆತ್ತಿನ ಚಕ್ಕಡಿಯಲ್ಲಿ ಬಂದು‌ ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ರೈತ‌ ವಿರೋಧಿ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲೇಬೇಕು. ಮಹದಾಯಿ ವಿವಾದ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಚಿತ್ರದುರ್ಗ : ಬಂದ್ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕ ಕಾರ್ಯಕರ್ತರಿಂದ ಚಿತ್ರದುರ್ಗದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಕಾರ್ಯಕರ್ತರು ಕೆಂಪೆಗೌಡ ಪ್ಯಾಸೆಂಜರ್ ರೈಲು ತಡೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮಹಾದಾಯಿ ನಮ್ಮದು ಎಂದು ಘೋಷಣೆ ಕೂಗಿದದ್ದಾರೆ. ಗೋವಾ ಸಿ.ಎಂ.ವಿರುದ್ದ ಕಾರ್ಯಕರ್ತರು ದಿಕ್ಕಾರ ಕೂಗಿದ್ದಾರೆ.

ಆನೇಕಲ್ – ಮಹದಾಯಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಐಟಿಬಿಟಿಗೆ ಬಂದ್ ಬಿಸಿ ತಟ್ಟಿದ್ದು ಐಟಿಬಿಟಿ ಕಂಪನಿಗಳು ರಜೆ ಘೋಷಿಸಿವೆ. ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯಲ್ಲಿನ ಇನ್ಪೋಸಿಸ್, ವಿಪ್ರೋ, ಸೀಮನ್ಸ್ ನಂತಹ ಕಂಪನಿಗಳಿಂದ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.

ದಾವಣಗೆರೆ ಜಿಲ್ಲೆಯ ತಾಲೂಕು ಪ್ರದೇಶಗಳಲ್ಲಿ ಬಂದ್ ಬಿಸಿ ಇಲ್ಲ. ಜಗಳೂರು, ಹರಪನಹಳ್ಳಿ, ಹೊನ್ನಾಳಿ, ಚನ್ನಗಿರಿ, ಹರಿಹರ ತಾಲೂಕುಗಳಲ್ಲಿ ಕೇವಲ ಪ್ರತಿಭಟನೆ ನಡೆದಿದ್ದು ಬಸ್ ಗಳ ಓಡಾಟ ಸಹಜವಾಗಿ ನಡೆಯುತ್ತಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿ ಸಾಗಿದೆ.

ಕೊಪ್ಪಳ : ಕೊಪ್ಪಳ ದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಕೇಂದ್ರೀಯ ಬಸ್ ನಿಲ್ದಾಣದ ಎದುರು ಬಟ್ಟೆ ಕಳಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನ ತಡೆಯಲು ಮುಂದಾದಾಗ ವಾಹನ ತಡೆಯಲು ಪೋಲೀಸರು ಅವಕಾಶ ನೀಡಲಿಲ್ಲ. ರಾಷ್ಟ್ರೀಯ ಹೆದ್ದಾರಿ 63 ರಸ್ತೆ ಮೇಲೆ ಮಲಗಿಕೊಂಡು ಕೇಂದ್ರ, ರಾಜ್ಯ ಸರ್ಕಾರ ದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com