ಪದ್ಮ ಶ್ರೀ ಪ್ರಶಸ್ತಿಯನ್ನು ಗೌರವಯುತವಾಗಿ ನಿರಾಕರಿಸಿದ ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ : ದೇಶದ ಅತ್ಯುನ್ನತ ನಾಗರಿಕ ಪದ್ಮ ಶ್ರೀ ಪ್ರಶಸ್ತಿಯನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಗೌರವಯುತವಾಗಿ ನಿರಾಕರಿಸಿದ್ದಾರೆ.

ಬುದ್ಧಿಜೀ ಎಂದು ಪ್ರಸಿದ್ಧರಾಗಿರುವ ಸಿದ್ಧೇಶ್ವರ ಸ್ವಾಮೀಜಿ ಅವರು ಇಲ್ಲಿಯವರೆಗೂ ನನ್ನ ಜೀವನದಲ್ಲಿ ಯಾವುದೇ ಗೌರವವನ್ನು ಸ್ವೀಕರಿಸಿಲ್ಲ ಎಂಬ ಕಾರಣ ನೀಡಿ ಪದ್ಮ ಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಮೇಲೆ ನನಗೆ ಅಪಾರ ಗೌರವವಿದೆ. ನಾನು ಓರ್ವ ಸರಳ ವ್ಯಕ್ತಿ. ನಾನು ಸಾಮಾನ್ಯ ಜೀವನವನ್ನು ನಡೆಸುತ್ತಾ ಆಧ್ಯಾತ್ಮಿಕ ಬೋಧನೆ ಮೂಲಕ ಜನರನ್ನು ಸುಖಮಯ ಜೀವನದತ್ತ ಕೊಂಡೊಯ್ಯುವ ಉದ್ದೇಶ ನನ್ನದು ಎಂದು ಸಿದ್ದೇಶ್ವರ ಸ್ವಾಮೀಜಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನನ್ನ ಜೀವನದಲ್ಲಿ ನಾನು ಎಂದಿಗೂ ಯಾವುದೇ ಗೌರವ ಪುರಸ್ಕಾರಗಳನ್ನು ಸ್ವೀಕರಿಸಿಲ್ಲ. ಈ ಹಿಂದೆ ಕರ್ನಾಟಕ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರಕಟಿಸಿದ್ದರು. ಆದರೆ ನಾನು ಆ ಗೌರವವನ್ನು ನಯವಾಗಿ ನಿರಾಕರಿಸಿದ್ದೆ. ಅದೇ ರೀತಿ ಪದ್ಮ ಶ್ರೀ ಪ್ರಶಸ್ತಿಯನ್ನು ನಿರಾಕಿಸಿದ್ದು ಇದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ.

Leave a Reply

Your email address will not be published.