ಚಿತ್ರದುರ್ಗ : ಫ್ಲೋರೈಡ್‌ ನೀರಿನ ಸಮಸ್ಯೆಯಿರುವ ಗ್ರಾಮಕ್ಕೆ ಪ್ರಕಾಶ್ ರೈ ಭೇಟಿ

ಚಿತ್ರದುರ್ಗ : ನಟ ಪ್ರಕಾಶ್‌ ರೈ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಂಡ್ಲಾರ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಗ್ರಾಮದಲ್ಲಿ ಫ್ಲೋರೈಡ್‌ ನೀರಿನ ಸಮಸ್ಯೆ ವ್ಯಾಪಕವಾಗಿದ್ದು, ಜನ ನಿತ್ಯ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಈ ಕುರಿತು ಪ್ರಕಾಶ್ ರೈ ಗ್ರಾಮಸ್ಥರ ಜೊತೆ ಚರ್ಚೆ ನಡೆಸಿ ತಮ್ಮ ಕನಸಿನ ಮಾದರಿ ಗ್ರಾಮದ ಬಗ್ಗೆ ವಿವರ ಹಂಚಿಕೊಂಡಿದ್ದಾರೆ. ಗ್ರಾಮಸ್ಥರ ಸಹಕಾರದೊಡನೆ ಫ್ಲೋರೈಡ್‌ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ನೀರಿನ ತಜ್ಞ ಎನ್‌ದೇವರಾಜರೆಡ್ಡಿ ಗ್ರಾಮದ ನೀರಿನ ಸಮಸ್ಯೆ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com