Cricket : ಭಾರತಕ್ಕೆ 63 ರನ್ ಗೆಲುವು : ಶಮಿ ಮಿಂಚಿನ ದಾಳಿ, ಭುವಿ ಪಂದ್ಯಶ್ರೇಷ್ಟ

ಜೋಹಾನೆಸ್ ಬರ್ಗ್ ನ ವಾಂಡರರ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ, ಆತಿಥೇಯ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 63 ರನ್ ಜಯಗಳಿಸಿದೆ. 241 ರನ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್ ನಲ್ಲಿ 187ಕ್ಕೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಆರಂಭಿಕ ಬ್ಯಾಟ್ಸಮನ್ ಡೀನ್ ಎಲ್ಗರ್ ರನ್ ಗಳಿಸಿ 86 ರನ್ ಗಳಿಸಿ ಅಜೇಯರಾಗುಳಿದರು. ತಾಳ್ಮೆಯ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದ ಹಾಶಿಮ್ ಆಮ್ಲ 52 ರನ್ ಗಳಿಸಿದರು. ಆದರೆ ದಕ್ಷಿಣ ಆಫ್ರಿಕಾದ ಇತರ ಬ್ಯಾಟ್ಸಮನ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.

ಶನಿವಾರ ನಡೆದ ನಾಲ್ಕನೇ ದಿನದಾಟದಲ್ಲಿ ಮಿಂಚಿನ ದಾಳಿ ನಡೆಸಿದ ಟೀಮ್ ಇಂಡಿಯಾ ವೇಗಿ ಮಹಮ್ಮದ್ ಶಮಿ 5 ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಜಸ್ಪ್ರೀತ್ ಬುಮ್ರಾ 2, ಇಶಾಂತ್ ಶರ್ಮಾ 2 ಹಾಗೂ ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.

 

Leave a Reply

Your email address will not be published.