ಪದ್ಮಶ್ರೀ ಪುರಸ್ಕೃತ ನರಸಮ್ಮ ಅವರ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌

ತುಮಕೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಫೋರ್ಟೀಸ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ನರಸಮ್ಮ ಅವರನ್ನು ತುಮಕೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಸಿರಾಟದ ತೊಂದರೆ ತೀವ್ರಗೊಂಡ ಹಿನ್ನೆಲೆಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ರವಾನಿಸಲಾಗಿದೆ.

ಕಳೆದ ಐದಾರು ದಿನಗಳಿಂದ ತುಮಕೂರಿನ ಆದರ್ಶ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಬೆಂಗಳೂರಿನ ಫೋರ್ಟೀಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನರಸಮ್ಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ವೈದ್ಯರು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com