ಗಾಂಧೀಜಿ ಹುತಾತ್ಮ ದಿನ : ರಾಜ್ಯದ ಹಲವೆಡೆ ಸೌಹಾರ್ದ ಸರಪಳಿಗೆ ಕೊಂಡಿಯಾದ ಜನತೆ

ಬೆಂಗಳೂರು : ಮಹಾತ್ಮಾ ಗಾಂಧೀಜಿ ಅವರ ಹುತಾತ್ಮ ದಿನಾಚರಣೆಯ ಅಂಗವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೌಹಾರ್ದ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಚಿತ್ರದುರ್ಗದ ಗಾಂಧಿಭವನದ ಎದುರಿಗೆ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿದ್ದು, ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ಈ ದಿನದಂದು ಕೋಮುವಾದ, ಮತೀಯ ಮೂಲಭೂತವಾದ, ಎಲ್ಲಾ ಬಗೆಯ ಭಯೋತ್ಪಾದನೆಯನ್ನು ಹಿಮ್ಮೆಟ್ಟಿಸಲು ಪಣ ತೊಡುವ ಸಂಕಲ್ಪ ಮಾಡಿದ್ದು, ಸರ್ವ ಜನಾಂಗದ ಶಾಂತಿಯ ತೋಟ’ವಾಗಿರುವ ಕರ್ನಾಟಕ ದ ವೈವಿಧ್ಯತೆಯ ಸಂಸ್ಕೃತಿಯನ್ನು ಸಂರಕ್ಷಸುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದ್ದಾರೆ.

ಇನ್ನು ರಾಯಚೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ  ಸೌಹಾರ್ದ ಸರಪಳಿ ಹಮ್ಮಿಕೊಳ್ಳಲಾಗಿದ್ದು, ಈ ಸರಪಳಿಗೆ ನೂರಾರು ಮಂದಿ ಕೊಂಡಿಯಾಗಿ ಪ್ರತಿಜ್ಞೆ ಸ್ವೀಕರಿಸಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com