ಚಂದ್ರಗ್ರಹಣಕ್ಕೂ ಮುನ್ನ ಉತ್ತರ ಭಾರತದಲ್ಲಿ ಕಂಪಿಸಿದ ಭೂಮಿ : 6.2 ರಷ್ಟು ತೀವ್ರತೆ ದಾಖಲು

ದೆಹಲಿ : ದೆಹಲಿ ಸೇರಿದಂತೆ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಚಂದ್ರಗ್ರಹಣಕ್ಕೂ ಮುನ್ನ ಭೂಮಿ ಕಂಪಿಸಿದೆ. ಅಫ್ಘಾನಿಸ್ತಾನದ ಹಿಂದ್‌ ಕುಷ್‌ ಪರ್ವತದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟು ದಾಖಲಾಗಿದೆ. ಬುಧವಾರ ಮದ್ಯಾಹ್ನ 12. 40ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಜನರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಉತ್ತರ ಭಾರತದ ರಾಜ್ಯಗಳಾದ,. ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್‌, ಹರಿಯಾಣ, ಪಂಜಾಬ್‌, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಹಾನಿಯ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com