4 ವರ್ಷ ಮುಗಿದವು, ಮೋದಿ ಸರ್ಕಾರ ಕೇವಲ 1 ವರ್ಷವಷ್ಟೇ ಬಾಕಿ : ರಾಹುಲ್ ಟ್ವೀಟ್

ಭಾರತದ ಸರ್ಕಾರದ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಬಜೆಟ್ ಮಂಡಿಸಿದ ಬೆನ್ನಲ್ಲೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.  ‘ ಮೋದಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳು ಕಳೆದುಹೋದವು, ಇನ್ನು ಒಂದು ವರ್ಷವಷ್ಟೇ ಬಾಕಿ ಉಳಿದಿದೆ ‘ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ‘ 4 ವರ್ಷ ಕಳೆದು ಹೋದವು, ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗಲಿಲ್ಲ. ವಿಕಾಸದ ಭ್ರಾಂತಿ ಹುಟ್ಟಿಸುವ ಯೋಜನೆಗಳು ಜಾರಿಗೆ ತಂದರು, ಆದರೆ ಬಜೆಟ್ ಸರಿಹೊಂದಲಿಲ್ಲ, ಇನ್ನೂ ದೇಶದ ಯುವಜನತೆಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿಲ್ಲ. ಪುಣ್ಯಕ್ಕೆ, ಇನ್ನು ಒಂದು ವರ್ಷವಷ್ಟೇ ಬಾಕಿ ಉಳಿದಿದೆ ‘ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com