ಫೆಬ್ರವರಿ 4ರಂದು ಬೆಂಗಳೂರು ಬಂದ್‌ ಮಾಡುವಂತಿಲ್ಲ : ಹೈಕೋರ್ಟ್‌

ಬೆಂಗಳೂರು : ಮಹದಾಯಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 4ರಂದು ಕರೆ ನೀಡಿರುವ ಬೆಂಗಳೂರು ಬಂದ್‌ಗೆ ಹೈಕೋರ್ಟ್ ತಡೆ ನೀಡಿದೆ.
ಬಂದ್‌ ಮಾಡುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ನೇತೃತ್ವದ ಪೀಠ, ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ಬಂದ್‌ ಮಾಡುವಂತಿಲ್ಲ. ಬಂದ್‌ ಮಾಡುವುದು ಸಂವಿಧಾನ ವಿರೋಧಿ. ಜನರಿಗೆ ತೊಂದರೆ ಮಾಡುವುದು ಮೂಲಭೂತ ಹಕ್ಕು ಹೇಗಾಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬಂದ್‌ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ಆದ್ದರಿಂದ ಬೆಂಗಳೂರಿನಲ್ಲಿ ಫೆಬ್ರವರಿ 4ರಂದು ಬಂದ್‌ ಮಾಡುವಂತಿಲ್ಲ ಎಂದಿದ್ದಾರೆ.
ಇನ್ನು ವಾಟಾಳ್‌ ಪಕ್ಷ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಮೋದಿ ರಾಜ್ಯಕ್ಕೆ ಆಗಮಿಸುತ್ತರುವ ಹಿನ್ನೆಲೆಯಲ್ಲಿ ಬಂದ್ ಮಾಡಿಯೇ ತೀರುವುದಾಗಿ ಹೇಳಿದ್ದು, ಒಂದು ವೇಳೆ ಬಂದ್ ಮಾಡಿದ್ದೇ ಆದರೆ ಅದು ನ್ಯಾಯಾಲಯದ ತೀರ್ಪಿನ ವಿರುದ್ದವಾಗಿದ್ದು, ಕ್ರಿಮಿನಲ್‌ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

Leave a Reply

Your email address will not be published.

Social Media Auto Publish Powered By : XYZScripts.com