Bangalore : ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿನ್ನೆ ಮದ್ಯಾಹ್ನ 2.30ರ ಸುಮಾರಿಗೆ ಕೆರೆಯ ಮಧ್ಯಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ. 3 ಗಂಟೆಯ ಸುಮಾರಿಗೆ ಹೊಗೆ ಹೆಚ್ಚಾದ ಕಾರಣ ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕಾರ್ಯಾಚರಣೆಗೆ 1 ದೋಣೆ 3ಅಗ್ನಿಶಾಮಕ ವಾಹನಗಳ ಸಹಿತ 20 ಸಿಬ್ಬಂದಿಗಳನ್ನೊಳಗೊಂಡ ತಂಡ ತ್ವರಿತ ಕಾರ್ಯಾಚರಣೆ ನಡೆಸಿದೆ. ಅಲ್ಲದೆ ಗಾಳಿಯ ಪ್ರಮಾಣವೂ ಹೆಚ್ಚಿರದ ಕಾರಣ ಬೆಂಕಿ, ಕೆರೆಯ ಹೆಚ್ಚು ಭಾಗ ವ್ಯಾಪಿಸಲು ಸಾಧ್ಯವಾಗಿಲ್ಲ.

ಇನ್ನು ಕಳೆದ ತಿಂಗಳು 19ರಂದು ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 24 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com