ಮಂಡ್ಯ ರಮೇಶ್‌ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಹಾಸ್ಯನಟ

ಮಂಡ್ಯ : ಹಾಸ್ಯ ನಟ ಮಂಡ್ಯ ರಮೇಶ್‌ ಅವರ ಕಾರು ಅಪಘಾತಕ್ಕೀಡಾಗಿದ್ದು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಬಳಿ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಜಾ ಟಾಕೀಸ್‌ ಶೂಟಿಂಗ್ ಮುಗಿಸಿಕೊಂಡು ಬೆಳಗ್ಗೆ 7 ಗಂಟೆ ಸುಮಾರಿಗೆ ರಮೇಶ್‌ ವಾಪಸ್ಸಾಗುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಲಾರಿಯನ್ನು ಓವರ್ ಟೇಕ್‌ ಮಾಡಲು ಹೋಗಿ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ.

ಅಪಘಾತವಾದ ಪರಿಣಾಮ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್‌ ಮಂಡ್ಯ ರಮೇಶ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವಾದ ಬಳಿಕ ತಮ್ಮ ಸ್ನೇಹಿತನಿಗೆ ಕರೆ ಮಾಡಿದ ರಮೇಶ್‌ ಸ್ನೇಹಿತನ ಬೈಕ್‌ನಲ್ಲಿ ಮೈಸೂರಿಗೆ ತೆರಳಿದ್ದಾರೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com