ಬಂದ್‌ ಮಾಡಲ್ಲ, ಆದರೆ ನಾಳೆ ಕರಾಳ ದಿನವನ್ನಾಗಿ ಆಚರಿಸ್ತೀವಿ : ವಾಟಾಳ್‌ ನಾಗರಾಜ್‌

ಬೆಂಗಳೂರು : ಬೆಂಗಳೂರಿನಲ್ಲಿ ಮಹದಾಯಿ ನದಿ ವಿಚಾರ ಸಂಬಂಧ ಬಂದ್‌ ಮಾಡುವುದು ಸಂವಿಧಾನ ವಿರೋಧಿ ಕೆಲಸ ಎಂದು ಹೈಕೋರ್ಟ್ ಹೇಳಿದ್ದ ಹಿನ್ನೆಲೆಯಲ್ಲಿ ನಾಳೆ ಕರೆ ನೀಡಿದ್ದ ಬಂದನ್ನು ಹಿಂಪಡೆಯಲಾಗಿದ್ದು, ಮೋದಿ ಆಗಮನದ ಹಿನ್ನೆಲೆಯಲ್ಲಿ ಕರಾಳ ದಿನವನ್ನಾಗಿ ಆಚರಿಸುವುದಾಗಿ ವಾಟಾಳ್‌ ನಾಗರಾಜ್‌ ಘೋಷಿಸಿದ್ದಾರೆ.
ಪ್ರಧಾನಿ ಮೋದ ಮಹದಾಯಿ ವಿವಾದ ಇತ್ಯರ್ಥಪಡಿಬೇಕು ಎಂದು ಒತ್ತಾಯಿಸಿ ಫೆಬ್ರವರಿ 4ರಂದು ಬಂದ್‌ ನಡೆಸುವುದಾಗಿ ಹೇಳಲಾಗಿದ್ದು, ಇದಕ್ಕೆ ಹೈಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿತತು.
 ಕೋರ್ಟ್‌ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಮೋದಿ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಅವರು ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವನ್ನಾಿ ಆಚರಣೆ ಮಾಡುತ್ತೇವೆ ಎಂದಿದ್ದಾರೆ.
ಅಲ್ಲದೆ ಫ್ರೀಡಂಪಾರ್ಕ್‌ ನಿಂದ ಅರಮನೆ ಮೈದಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com