ಬೆಂಗಳೂರಿಗೆ ಮೋದಿ ಆಗಮನ : ಸ್ವಾಗತಕ್ಕೆ ಸಜ್ಜಾಗಿದೆ ಅರಮನೆ ಮೈದಾನ

ಬೆಂಗಳೂರು : ಬಿಜೆಪಿ ಪರಿವರ್ನಾಯಾತ್ರೆಗೆ ಇಂದು ತೆರೆ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಜ ಜನತೆಯನ್ನೇದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಇದಾಗಿದ್ದು, ಮೋದಿ ತಮ್ಮ ಭಾಷಣದ ಮೂಲಕ ವಿಧಾನ ಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಎಲ್ಲಾ ರೀತಿಯ ಸಿದ್ದತೆ ನಡೆಸಲಾಗಿದೆ. ಈ ಸಮಾರೋಪ ಸಮಾರಂಭಕ್ಕೆ ರಾಜ್ಯದ ಹಲವೆಡೆಯಿಂದ ನಾಲ್ಕು ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ಮೋದಿ ದೆಹಲಿಯಿಂದ ಮಧ್ಯಾಹ್ನ 1 ಗಂಟೆಯ ವೇಳೆಗೆ ಹೊರಡಲಿದ್ದು, 3.30ರ ವೇಳೆಗೆ ಎಚ್‌ಎಎಲ್‌ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅರಮನೆ ಮೈದಾನದಲ್ಲಿ 2ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಬೃಹತ್‌ ವೇದಿಕೆ ಸಹ ಸಿದ್ಧಗೊಂಡದೆ. ಸಮಾರಂಭಕ್ಕೆ 1200 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಮುಂಜಾನೆಯಿಂದಲೇ ಪೊಲೀಸರು ನಗರದ ಹಲವೆಡೆ ಹಾಗೂ ಅರಮನೆ ಮೈದಾನದ ಸುತ್ತಮುತ್ತ ಸರ್ಪಗಾವಲು ಹಾಕಿದ್ದಾರೆ.

ಈಗಾಗಲೆ ಬೆಂಗಳೂರಿನಲ್ಲಿ ನಡೆಯುವ ಸಮಾವೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡಲು ಬಿಜೆಪಿ ನಿರ್ಧರಿಸಿದ್ದು,  200 ಮಂದಿ ಬಿಜೆಪಿ ಕಾರ್ಯಕರ್ತರಿಂದ ಫೇಸ್‌ಬುಕ್‌ ಲೈವ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿಯೇ ಕಾರ್ಯಕರ್ತರಿಗೆ ವಿಶೇಷ ತರಬೇತಿ ನೀಡಲಾಗಿದೆ.

ಸಾರ್ವಜನಿಕರಿಗೆ ತೊಂದರೆಯಾಗದಂತೆ 300 ಇ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. 13 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com