ಗ್ರಾಮದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ಭೀಕರ ಅಪಘಾತ : ಇಬ್ಬರು ಬಾಲಕರ ಸಾವು
ಚಿಕ್ಕಬಳ್ಳಾಪುರ : ದೇವರ ಉತ್ಸವ ಮೂರ್ತಿಗಳ ಮೆರವಣಿಗೆ ವೇಳೆ ಲಾರಿಯೊಂದು ಹರಿದು ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರದ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕರನ್ನು ಗೌತಮ್ (11), ಶ್ರೇಯಸ್ (17) ಎಂದು ಹೆಸರಿಸಲಾಗಿದೆ. ಇನ್ನುಳಿದ 9 ಮಂದಿಗೆ ಮಂದಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಕೆಲ ದಿನಗಳಿಂದ ವಿನಾಕಾರಣ ಜನ ಸಾವಿಗೀಡಾಗುತ್ತಿದ್ದಾರೆ ಎಂಬ ಕಾರಣಕ್ಕೆ ಪರಿಹಾರಕ್ಕಾಗಿ ಗ್ರಾಮಸ್ಥರು ಗ್ರಾಮದೇವತೆಗಳ ಉತ್ಸವ ಮೂರ್ತಿ ಮೆರವಣಿಗೆ ನಡೆಸಿದ್ದರು. ಆದರೆ ಉತ್ಸವ ಮೂರ್ತಿ ಕೊಂಡೊಯ್ಯುತ್ತಿದ್ದ ಮಿನಿ ಟ್ರ್ಯಾಕ್ಟರ್ ಲಾರಿಗೆ ಗುದ್ದಿದ ಪರಿಣಾಮ ಲಾರಿ ಹರಿದು ಇಬ್ಬರು ಬಾಲಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.