ರಾಜ್ಯ ಸರ್ಕಾರವನ್ನು ಕೊಂಡಾಡಿದ ರಾಜ್ಯಪಾಲ ವಜೂಭಾಯಿ ವಾಲಾ : BJP ಗೆ ಮುಜುಗರ

ಬೆಂಗಳೂರು : ವಿಧಾನ ಮಂಡಲದ ಮೊದಲ ದಿನದ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾತನಾಡಿದ್ದು, ರಾಜ್ಯ ಸರ್ಕಾರದ ಸಾಧನೆಗಳನ್ನು ಕೊಂಡಾಡಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕವನ್ನು ಹಸಿವು ಮುಕ್ತ ಮಾಡಲು ಅನ್ನಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್‌ನಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರಿಂದ ಜನರಿಗೆ ಅನುಕೂಲವಾಗಿದೆ. ಇನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹಿಳೆಯರಿಗೂ ವಿಶೇಷ ಆದ್ಯತೆ ನೀಡಲಾಗಿದ್ದು, ಮಾತೃಪೂರ್ಣ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಓದಿದ ರಾಜ್ಯಪಾಲರು ಅಭಿವೃದ್ಧಿಗೆಆದ ಖರ್ಚು ವೆಚ್ಚಗಳ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಮಹದಾಯಿ ವಿಚಾರವಾಗಿ ಮಾತನಾಡಿರುವ ರಾಜ್ಯಪಾಲರು,ಮಹದಾಯಿ ನದಿ ಪ್ರದೇಶದ ಜನರ ಹಕ್ಕಿನ ಪಾಲನ್ನು ದೊರಕಿಸಿಕೊಡಲು ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತೇವೆ. ಕಾವೇರಿ ಕೃಷ್ಣ, ಜಲಾನಯನ ಪ್ರದೇಶಗಳ ನ್ಯಾಯಯುತ ನೀರಿನ ಬೇಡಿಕೆ ಈಡೇರಿಸಲು ನಾವು ಎಂದಿಗೂ ಬದ್ದವಾಗಿರುತ್ತೇವೆ. ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಭಾಷಣದ ಬಳಿಕ ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚಿಸಿ ಸದನವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂದು ಭಾಷಣದ ಮೇಲೆ ಚರ್ಚೆ ಪ್ರಾರಂಭವಾಗಲಿದ್ದು, ಫೆಬ್ರವರಿ 28ರವರೆಗೆ ಅಧಿವೇಶನ ನಡೆಯಲಿದೆ. ಬಳಿಕ ಫೆಬ್ರವರಿ 16ರಂದು ಸಿದ್ದರಾಮಯ್ಯ ಬಜೆಟ್‌ ಘೋಷಿಸಲಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com