BJP ಕಾರ್ಯಕರ್ತ ಪರೇಶ್‌ ಮೇಸ್ತಾ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ

ಹೊನ್ನಾವರ : ಹೊನ್ನಾವರದ ಬಿಜೆಪಿ ಕಾರ್ಯಕರ್ತ ಪರೇಶ್‌ ಮೇಸ್ತಾ ನಿಗೂಢ ಸಾವಿನ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳದ ಶಿರಾಲಿ ಬಳಿ ಆಸಿಫ್‌ ರಫೀಕ್‌ ಎಂಬಾನನ್ನು ಬಂಧಿಸಿರುವ ಪೊಲೀಸರು, ಆತನ ವಿಚಾರಣೆ ನಡೆಸುತ್ತಿದ್ದಾರೆ. ಆಸಿಫ್‌, ಪರೇಶ್ ಮೇಸ್ತಾ ಸಾವಿನ ಬಳಿಕ ತಲೆ ಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಈ ಹಿಂದೆ ಕಮಲಾಕರ್‌ ಮೇಸ್ತಾ ನೀಡಿದ್ದ ದೂರಿನ ಅನ್ವಯ ಪೊಲೀಸರು ಈಗಾಗಲೆ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳಾದ ಫೈಸಲ್‌ ಅಣ್ಣಿಗೇರಿ, ಇಮ್ತಿಯಾಜ್‌ ಗನಿ ಎಂಬುವವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com