ವೃದ್ಧನಿಗೆ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್‌ ಸವಾರನನ್ನು ನಡುರಸ್ತೆಯಲ್ಲಿ ಕೊಂದೇಬಿಟ್ರು ಗ್ರಾಮಸ್ಥರು !

ಕಲಬುರಗಿ : ವೃದ್ಧನಿಗೆ ಬೈಕ್‌ ಸವಾರ ಡಿಕ್ಕಿ ಹೊಡೆದ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಗ್ರಾಮಸ್ಥರು ಬೈಕ್‌ ಸವಾರನನ್ನು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಳಂದ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ಯುವಕನನ್ನನ ಅಂಬರೀಶ್ ಎಂದು ಹೆಸರಿಸಲಾಗಿದೆ. ಈತ ಭಾನುವಾರ ರಾತ್ರಿ ವೃದ್ಧ ಮಲ್ಲಯ್ಯ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಇದನ್ನು ನೋಡಿದ ಗ್ರಾಮಸ್ಥರು ಆತನನ್ನು ಥಳಿಸಿದ್ದು ಬಳಿಕ ಕೊಲೆ ಮಾಡ ಶವವನ್ನು ಬಾವಿಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಅಂಬರೀಶ್‌ ಕುಟುಂಬಸ್ಥರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕುಟುಂಬಸ್ಥರ ದೂರಿನ ಮೇರೆಗೆ ನರೋಣ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇನ್ನು ಗಾಯಗೊಂಡಿದ್ದ ವೃದ್ದ ಮಲ್ಲಯ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com