ಸುಪ್ರೀಂಕೋರ್ಟ್‌ನಲ್ಲಿಂದು ಕಾವೇರಿ ತೀರ್ಪು : KRS ಗೆ ಬಿಗಿ ಭದ್ರತೆ

ಮಂಡ್ಯ : ರಾಜ್ಯದಲ್ಲಿ ಬೇಸಿಗೆ ಶುರುವಾಗುತ್ತಿದ್ದು, ನೀರಿನ ಬೇಡಿಕೆ ಹೆಚ್ಚುತ್ತಿದೆ. ಈ ಮಧ್ಯೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರವಾಗಿ ತೀರ್ಪು ಹೊರಬರಲಿದ್ದು, ಈ ಹಿನ್ನೆಲೆಯಲ್ಲಿ ಕೆಆರ್‌ಎಸ್‌ಗೆ ಬಿಗಿ ಪೊಲೀಸ್‌ ಭದ್ರತೆ ಹಾಕಲಾಗಿದೆ.

ಕಾವೇರಿ ನೀರಿನ ವಿಚಾರದಲ್ಲಿ ತೀರ್ಪು ಕರ್ನಾಟಕದ ವಿರುದ್ದ ಬಂದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದ್ದು, ಬಿಗಿ ಭದ್ರತೆ ಹಾಕಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಹೆಚ್ಚಿನ ಅಗತ್ಯ ಬಿದ್ದರೆ ಮತ್ತಷ್ಟು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡುವುದಾಗಿ ಮಂಡ್ಯ ಎಸ್‌ಪಿ ಹೇಳಿದ್ದಾರೆ.

ವ್ಯತಿರಿಕ್ತ ತೀರ್ಪು ಬಂದರೆ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದ್ದು, ಈ ಬಗ್ಗೆ ಎಲ್ಲಾ ಸಂಘಟನೆಗಳ ಜೊತೆ ಮಾತುಕತೆ ನಡೆಸಿರುವುದಾಗಿಯೂ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com