ಖ್ಯಾತ ಹಾಡುಗಾರ ಸೋನು ನಿಗಂ ಹತ್ಯೆಗೆ ಸಂಚು ! : ಗುಪ್ತಚರ ಇಲಾಖೆಯಿಂದ ಮಾಹಿತಿ

ಮುಂಬೈ : ಖ್ಯಾತ ಹಾಡುಗಾರ ಸೋನು ನಿಗಂ ಅವರ ಹತ್ಯೆಗೆ ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೋನು ನಿಗಂ ಅವರಿಗೆ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಲ ಮೂಲಭೂತವಾದಿ ಸಂಘಟನೆಗಳು ಸೋನು ನಿಗಂ ಹತ್ಯೆಗೆ ಸಂಚು ರೂಪಿಸಿರುವುದಾಗಿ ತಿಳಿದುಬಂದಿದೆ. ಮೂಲಭೂತವಾದಿಗಳು ನಡೆಸುವ ಕಾರ್ಯಕ್ರಮದಲ್ಲಿ ಸೋನು ನಿಗಂ ಅವರನ್ನು ಕರೆಸಿ ಹತ್ಯೆ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಹೇಳಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ಕಳೆದ ವರ್ಷ ಸೋನು ನಿಗಂ, ಮುಂಜಾನೆ ಮುಸ್ಲೀಮರು ಪ್ರಾರ್ಥನೆ ಸಲ್ಲಿಸುವುದರ ವಿರುದ್ದ  ಟ್ವಿಟರ್‌ನಲ್ಲಿ ಕಿಡಿ ಕಾರಿದ್ದರು. ಈ ವಿಷಯ ಎಲ್ಲೆಡೆ ವೈರಲ್ ಆಗಿತ್ತು. ಬಳಿಕ ರಾಷ್ಟ್ರಗೀತೆಯ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅನೇಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದಾಗಿ ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com