ಇನ್ನೆರೆಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಾಲ್ಡೀವ್ಸ್‌ನಿಂದ ಕರ್ನಾಟಕ ಕರಾವಳಿ ಪ್ರದೇಶದ ವರೆಗೆ ವಾಯುಭಾರ ಕುಸಿತವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದಾಗಿ ಹೇಳಲಾಗಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ನಿರ್ದೇಶಕ ಸುಂದರ್‌ ಎಂ ಮೈತ್ರಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com