ಬೆಂಗಳೂರು : ಸೀನಿಯರ್ ಗಳಿಂದ ರ‍್ಯಾಗಿಂಗ್, ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮೇಘನಾ (18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕುಮಾರಸ್ವಾಮಿ ಲೇಔಟ್ ದಯಾನಂದಸಾಗರ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಂಗಳವಾರ ಮದ್ಯಾಹ್ನ‌ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದ ಶಬರಿ ಅಪಾರ್ಟ್ಮೆಂಟ್ ನ ಫ್ಲಾಟ್ ನಲ್ಲಿ ಘಟನೆ ನಡೆದಿದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕ್ಲಾಸ್ ರೆಪ್ರೆಸೆಂಟೇಟಿವ್ ಎಲೆಕ್ಷನ್ ಮೇಘನಾಳನ್ನ ಬಲಿ‌ ಪಡೆದಿರಬಹುದೆಂದು ಶಂಕಿಸಲಾಗುತ್ತಿದೆ.

ಹೆಚ್.ಓ.ಡಿ ರಾಜಕುಮಾರ್ ಮತ್ತು ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ರ‍್ಯಾಗಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಎಲೆಕ್ಷನ್ ಸಂಬಂಧ ರ‍್ಯಾಗಿಂಗ್ ಮಾಡುತ್ತಿದ್ದುದರಿಂದ ಮಗಳು ಮನನೊಂದು ಅತ್ಮಹತ್ಯೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ 306 ಅಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com