ವೈದ್ಯರ ನಿರ್ಲಕ್ಷ್ಯಕ್ಕೆ ತುಂಬು ಗರ್ಭಿಣಿ ಬಲಿ : ಕುಟುಂಬಸ್ಥರಿಂದ ಆಸ್ಪತ್ರೆ ಎದುರು ಪ್ರತಿಭಟನೆ

ಕೋಲಾರ : ಗರ್ಭಿಣಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಗರ್ಭಿಣಿಯನ್ನು ಅನಸೂಯಮ್ಮ (22) ಎಂದು ಹೆಸರಿಸಲಾಗಿದೆ. ಮಂಗಳವಾರ ರಾತ್ರಿ ಅನಸೂಯಮ್ಮ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮಾಸ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಆದರೆ ಬುಧವಾರ ಬೆಳಗ್ಗೆ ವೈದ್ಯರಿಲ್ಲದ ಕಾರಣ ಚಿಕಿತ್ಸೆಗಾಗಿ ಗರ್ಭಿಣಿಯನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಅನಸೂಯಮ್ಮ ಮೃತಪಟ್ಟಿದ್ದಾರೆ. ಗರ್ಭಿಣಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ  ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com