ಭೀಕರ ರಸ್ತೆ ಅಪಘಾತ : ಮೋದಿ ಪತ್ನಿ ಜಶೋದಾ ಬೆನ್ ತಲೆಗೆ ಗಂಭೀರ ಗಾಯ

ಜೈಪುರ : ರಾಜಸ್ಥಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಧಾನಿ ಮೋದಿ ಅವರ ಪತ್ನಿ ಜಶೋದಾ ಬೆನ್‌ ಅವರ ತಲೆಗೆ ಭಾರೀ ಪೆಟ್ಟು ಬಿದ್ದಿರುವುದಾಗಿ ಮೂಲಗಳು ತಿಳಿಸಿವೆ.

ಕೋಟಾ -ಚಿತ್ತೂರು ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮೋದಿ ಅವರ ಪತ್ನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ರಾಜಸ್ಥಾನದಲ್ಲಿ ಜಶೋದಾಅವರ ಸಂಬಂಧಿಕರ ಮನೆಯಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಆದ ಕಾರಣ ಜಶೋದಾ ಬೆನ್‌ ಹಾಗೂ ಅವರ ಸಹೋದರ ಪ್ರಕಾಶ್‌ ಮೋದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಕಾರಿನಲ್ಲಿ ಆಗಮಿಸುವ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com