ಆನೆ ಏರಿದ ತೆನೆಹೊತ್ತ ಮಹಿಳೆ : ಚುನಾವಣೆಗೆ BSP ಜೊತೆ JDS ಮೈತ್ರಿ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಬಿಎಸ್‌ಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎಂದು ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಕುಮಾರಸ್ವಾಮಿ, ಎರಡು ರಾಷ್ಟ್ರೀಯ ಪಕ್ಷಗಳಿಂದ ಕರ್ನಾಟಕದಲ್ಲಿ ಬಹುದೊಡ್ಡ ಅನಾಹುತ ಆಗಿಹೋಗಿದೆ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಜೆಡಿಎಸ್‌ ಬಹುಮತ ಪಡೆದು ಸರ್ಕಾರ ರಚನೆ ಮಾಡುವ ಸಲುವಾಗಿ ಸಣ್ಣಪುಟ್ಟ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ. ಈಗಗಾಲೆ ಬಿಎಸ್‌ಪಿ ಜೊತೆ ಒಪ್ಪಂದ ಮಾಡಿಕೊಂಡಿದ್ದು, 20 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಜೊತೆಗೆ 30 ಜಿಲ್ಲೆಗಳಲ್ಲಿ ಬಿಎಸ್‌ಪಿ ಹಾಗೂ ಜೆಡಿಎಸ್‌ನ ಮೈತ್ರಿ ಅಭ್ಯರ್ಥಿಗಳು 14 ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com