ನನ್ನ ಮಗನೇ ಬಾಸ್‌, ಅವನನ್ನು ಎಲ್ಲರೂ ಬೆಂಬಲಿಸಿ : ಸೋನಿಯಾ ಗಾಂಧಿ

ದೆಹಲಿ : ನನಗೆ ನನ್ನ ಮಗನೇ ಬಾಸ್‌. ಆತನನ್ನು ಎಲ್ಲರೂ ಬೆಂಬಲಿಸಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಸಂಸತ್ತಿನಲ್ಲಿ ಕಾಂಗ್ರೆಸ್‌ ಸಂಸದರ  ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ನಮ್ಮ ಮುಖ್ಯಸ್ಥರು. ಇದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲರೂ ಇವರಿಗೆ ಬೆಂಬಲ ನೀಡಬೇಕು. ಹಿಂದಿನಂತೆಯೇ ಎಲ್ಲರೂ ರಾಹುಲ್ ಜೊತೆ ಪ್ರೀತಿ, ವಿಶ್ವಾಸದಿಂದ ಇದ್ದು, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೀರೆಂಬ ನಂಬಿಕೆ ನನಗಿದೆ ಎಂದಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ಗಾಂಧಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ಅಧ್ಯಕ್ಷರಿಗಿರಬೇಕಾದ ಸಾಮರ್ಥ್ಯವಿದೆ. ಅದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.

ಇದೇ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಆಡಳಿತ ನಡೆಸುತ್ತಿರುವ ಸರ್ಕಾರದಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆದಿದ್ದರೂ ಇನ್ನೂ ಯಾವುದೇ ಅಭಿವೃದ್ಧಿಯಾಗಿಲ್ಲ. ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.

Leave a Reply

Your email address will not be published.