Koppala : ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ : ಸ್ಥಳದಲ್ಲೇ ನಾಲ್ವರ ದುರ್ಮರಣ

ಕೊಪ್ಪಳ : ಡೀಸೆಲ್‌ ಟ್ಯಾಂಕರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೊಪ್ಪಳದ ಯಲಬುರ್ಗಾ ತಾಲ್ಲೂಕಿನ ತಳಕಲ್ಲ -ಬನ್ನಿಕೊಪ್ಪ ಗ್ರಾಮದ ಮಧ್ಯೆ ನಡೆದಿದೆ.

ಮೃತರನ್ನು ಚೆನ್ನಪ್ಪ ಈರಪ್ಪ ಹಡಪದ (32), ಈರಮ್ಮ ಹಡಪದ (50), ಮೌಲಾಭಿ (55), ಮಹಮದ್‌ ರಜಾಸಾಬ್‌ ಕವಲೂರು (20) ಎಂದು ಹೆಸರಿಸಲಾಗಿದೆ. ಮೃತರು ಕೊಪ್ಪಳದ ಯಲಬುರ್ಗಾ ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ದಿನಗೂಲಿ ಕೆಲಸಕ್ಕಾಗಿ ಟ್ರ್ಯಾಕ್ಟ್ರರ್‌ನಲ್ಲಿ ಕುಕನೂರಿನಿಂದ ಕೊಪ್ಪಳಕ್ಕೆ ಹೋಗುತ್ತಿದ್ದರು. ಹಿಂದಿನಿಂದ ಡೀಸೆಲ್‌ ಟ್ಯಾಂಕರ್ ವೇಗವಾಗಿ ಬರುತ್ತಿತ್ತು. ಈ ವೇಳೆ ಟ್ಯಾಂಕರ್‌ ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎರಡೂ ವಾಹನಗಳು ನುಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂದ ಕುಕನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com