ತೆಂಡೂಲ್ಕರ್ ಪುತ್ರಿ ಸಾರಾ ಹೆಸರಿನಲ್ಲಿ ನಕಲಿ ಟ್ವಿಟರ್‌ ಖಾತೆ ತೆರೆದಿದ್ದ ಟೆಕ್ಕಿಯ ಬಂಧನ

ಮುಂಬೈ : ಭಾರತೀಯ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ಪುತ್ರಿ ಸಾರಾ ತೆಂಡೂಲ್ಕರ್‌ ಅವರ ಹೆಸರಿನಲ್ಲಿ ನಕಲಿ ಟ್ವಿಟರ್‌ ಖಾತೆ ತೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಿತೀಶ್‌ ಶಿಶೋಡೆ ಎಂದು ಹೆಸರಿಸಲಾಗಿದ್ದು, ಈತ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ.

ಸಾರಾ ತೆಂಡೂಲ್ಕರ್‌ ಹೆಸರಿನಲ್ಲಿ ಈತ ನಕಲಿ ಟ್ವಿಟರ್ ಖಾತೆ ತೆರೆದು ಅದರಲ್ಲಿ ಶರದ್‌ ಪವಾರ್ ಅವರ ವಿರುದ್ಧದ ಪೋಸ್ಟ್‌ಗಳನ್ನು ಹಾಕುತ್ತಿದ್ದ. ಈ ಬಗ್ಗೆ ಸಾರಾ ಹಾಗೂ ಸಚಿನ್‌ ತೆಂಡೂಲ್ಕರ್‌ ಪೊಲೀಸರಿಗೆ ದೂರು ನೀಡಿದ್ದು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕಳೆದ ತಿಂಗಳು ಸಾರಾಗೆ ಕರೆ ಮಾಡಿ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಬಂಧಿಸಿದ್ದರು. ಈಗ ಸಾರಾ ಅವರ ನಕಲಿ ಟ್ವಿಟರ್‌ ಖಾತೆ ತೆರೆದಿದ್ದ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published.