ಸಾಯುವ ಆಸೆ ಇರುವವರು ಸಂಘಪರಿವಾರಕ್ಕೆ ಸೇರಿಕೊಳ್ಳಿ : ವಿವಾದದಲ್ಲಿ ಕಾಂಗ್ರೆಸ್‌ ನಾಯಕಿ

ಮಂಗಳೂರು : ಸಾಯುವ ಮನಸ್ಸಿರುವವರು, ಕೆಲಸ ಮಾಡಲು ಮನಸ್ಸಿಲ್ಲದವರು ಸಂಘಪರಿವಾರಕ್ಕೆ ಸೇರಿಕೊಳ್ಳಿ ಎಂದು ಸೂರತ್ಕಲ್‌ ಕಾರ್ಪೋರೇಟರ್‌ ಹೇಳಿಕೆ ನೀಡಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ದ ಆಕ್ಷೇಪ ವ್ಯಕ್ತಪಡಿಸಿರುವ ಕಾರ್ಪೊರೇಟರ್‌ ಪ್ರತಿಭಾ ಕುಳಾಯಿ, ಯಾರಿಗೆಲ್ಲ ಸಾಯಲು ಮನಸ್ಸಿದೆ ಅವರು ಸಂಘ ಪರಿವಾರ ಸೇರಿ. ದುಡಿಯಲು ಮನಸ್ಸಿಲ್ಲದವರೂ ಸಂಘ ಪರಿವಾರ ಸೇರಿ. ಮರ್ಡರ್ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಎಷ್ಟು ಬೇಕಾದ್ರೂ ಅನ್ನ ಸಿಗುತ್ತದೆ ಎಂದಿದ್ದಾರೆ. ಧರ್ಮಾರ್ಥ ನಿಮಗೆ ಜೈಲಿನಲ್ಲಿ ಅನ್ನ ಸಿಗುತ್ತದೆ, ಕೊಲೆ ಮಾಡಿಸಿದ ಸಂಘ ಪರಿವಾರದವರು ಜೈಲಿಗೆ ಇಣುಕಿ ನೋಡಲು ಹೋಗುವುದಿಲ್ಲ ಎಂದಿದ್ದಾರೆ.
ಯಾರಾದ್ರೂ ಹಿಂದುಗಳು ಸತ್ತರೆ ಸಾಕು, ವಾಟ್ಸಾಪ್ ಫೇಸ್ ಬುಕ್ ನಲ್ಲಿ ಸತ್ತವರ ಬಗ್ಗೆ ಪ್ರಚಾರ ಮಾಡ್ತಾರೆ. ಇಷ್ಟು ಕೋಟಿ ಸಂಗ್ರಹ ಆಗಿದೆ , ಅಷ್ಟು ಕೋಟಿ ಸಂಗ್ರಹ ಆಯ್ತು ಎನ್ನುತ್ತಾರೆ. ಆದ್ರೆ ಸಂತ್ರಸ್ತ ಮನೆಯವರಿಗೆ ಒಂದು ರುಪಾಯಿ ಈವರೆಗೆ ಸಿಕ್ಕಿಲ್ಲ. ಶರತ್ ಮಡಿವಾಳ ತಂದೆ ಹೇಳಿಕೆ ಕೊಟ್ಟಿದ್ದರು. ದೀಪಕ್ ರಾವ್ ಕೊಲೆಯಾದಾಗ್ಲೂ ಕೋಟಿಗಟ್ಟಲೆ ಸಂಗ್ರಹ ಮಾಡಿದ್ದಾರೆ. ದೀಪಕ್ ರಾವ್ ಮನೆಯವರಿಗೆ ಇವತ್ತಿನವರೆಗೆ ಒಂದು ರುಪಾಯಿ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಯುವಕರು ಸತ್ತರೆ ಹಿಂದೂಪರ ಸಂಘಟನೆಗಳು ಸಂಭ್ರಮಿಸುತ್ತವೆ. ಹಲವಾರು ಹಿಂದೂಗಳನ್ನು ಇವರೇ ಕೊಂದಿದ್ದಾರೆ. ನಾನು ಕೂಡಾ ಒಬ್ಬಳು ಹಿಂದೂ. ನನ್ನ ಬಣ್ಣ ಕೂಡಾ ಕೇಸರಿಯೇ. ಬಿಜೆಪಿಯವರು ಕೇಸರಿಯನ್ನಯ ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com