Ramanagara : ಮನೆಗೆ ಡಿಕ್ಕಿ ಹೊಡೆದ ಗ್ರಾನೈಟ್‌ ತುಂಬಿದ್ದ ಲಾರಿ : ಚಾಲಕ ಪರಾರಿ

ರಾಮನಗರ : ಗ್ರಾನೈಟ್‌ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿರುವ ಘಟನೆ ರಾಮನಗರ ತಾಲ್ಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ.

ಮುಂಜಾನೆ 3 ಗಂಟೆ ಸುಮಾರಿಗೆ ಲಾರಿಯೊಂದು ಗ್ರಾನೈಟ್‌ ತುಂಬಿಕೊಂಡು ರಸ್ತೆಯಲ್ಲಿ ಹೋಗುತ್ತಿತ್ತು. ಈ ವೇಳೆ ಅಚ್ಚಲು ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಲಾರಿ ಗುದ್ದಿದ ರಭಸಕ್ಕೆ ಮನೆ ಸಂಪೂರ್ಣ ಹಾಳಾಗಿದ್ದು, ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com