CM ಸಿದ್ದರಾಮಯ್ಯ ಭರವಸೆ : ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ

ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕರ್ತೆಯರಿಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಐದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆ ವಿಫಲವಾಗಿದ್ದು, ಫೆಬ್ರವರಿ 16ರಂದು ನಡೆಯುವ ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಹಣ ನಿಗಧಿ ಮಾಡುವುದಾಗಿ ಭರವಸೆ ನೀಡಿದ್ದು, ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಈ ವಿಚಾರವನ್ನು ಪ್ರತಿಭಟನಾಕಾರರಿಗೆ ತಿಳಿಸಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಅನೇಕ ಕಡೆಯಿಂದ ಬಂದಿದ್ದ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಐದು ದಿನಗಳಿಂದ ಹಗಲು ರಾತ್ರಿಯೆನ್ನದೆ ಪ್ರತಿಭಟನೆ ನಡೆಸಿದ್ದರು. ನಾವು ಕನಿಷ್ಟ ವೇತನ ಕೇಳುತ್ತಿದ್ದೇವೆ. ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಕೊಡಿ ಎಂಬ ಬೇಡಿಕೆ ಅವರದ್ದಾಗಿತ್ತು.

Leave a Reply

Your email address will not be published.

Social Media Auto Publish Powered By : XYZScripts.com