ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ : ರಾಜ್ಯದೆಲ್ಲೆಡೆ ಪ್ರವಾಸ

ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರುತ್ತಿದ್ದು, ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ. ಇನ್ನು ಕೆಲ ನಾಯಕರು ಪ್ರತ್ಯೇಕವಾಗಿಯೂ ಚುನಾವಣಾ ಪ್ರಚಾರಕ್ಕೆ ತಂತ್ರಗಳನ್ನು ರೂಪಿಸಿಕೊಂಡಿದ್ದಾರೆ.

ಅದೇ ರೀತಿ ಬೆಳಗಾವಿಯ ಪ್ರಭಾವಿ ನಾಯಕ ಎನಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕಾಗಿ ಪ್ರತ್ಯೇಕ ಹೆಲಿಕಾಪ್ಟರ್‌ ತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಪಕ್ಷದ ಸಂಘಟನೆಗಾಗಿ ಹಾಗೂ ಪ್ರಚಾರಕ್ಕಾಗಿ ಈ ಹೆಲಿಕಾಪ್ಟರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇದಕ್ಕಾಗಿ ಬೆಳಗಾವಿ ನಗರ, ಯಮಕನಮರಡಿ ಕ್ಷೇತ್ರದ 8 ಸ್ಥಳಗಳಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಲ್‌ಕಂಪನಿಯ ಈ ಹೆಲಿಕಾಪ್ಟರ್‌ನಲ್ಲಿಯೇ ರಾಜ್ಯ ಪ್ರವಾಸ ಮಾಡಲಿದ್ದಾರೆ.

2013ರಲ್ಲೂ ಸತೀಶ್‌ ಜಾರಕಿಹೊಳಿ ಚುನಾವಣೆ ವೇಳೆ ಪ್ರಚಾರಕ್ಕೆ ಬಾಡಿಗೆ ಹೆಲಿಕಾಪ್ಟರ್‌ ತಂದಿದ್ದರು. ಆದರೆ ಈ ಬಾರಿ ಸ್ವಂತ ಹೆಲಿಕಾಪ್ಟರ್‌ ಬಳಸಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.

Leave a Reply

Your email address will not be published.