ಮತ್ತೆ ಉಗ್ರರ ಅಟ್ಟಹಾಸ : ಗುಂಡಿನ ದಾಳಿಗೆ ಹುತಾತ್ಮರಾದ ಇಬ್ಬರು ಯೋಧರು

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಎಲ್ಲೆ ಮೀರಿದೆ. ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ. ಈ ವೇಳೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮ್ಮುಕಾಶ್ಮೀರದ ಹೊರವಲಯದಲ್ಲಿರುವ ಚೆನ್ನಿ ಪ್ರಾಂತ್ಯದ ಸಂಜುವನ್‌ನಲ್ಲಿ ಸೇನಾ ಕ್ಯಾಂಪನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ 4.45ರ ಸುಮಾರಿಗೆ ದಾಳಿ ನಡೆಸಲಾಗಿದೆ.
ಮುಂಜಾನೆ ಯೋಧರು ಕ್ಯಾಂಪ್‌ನಲ್ಲಿದ್ದ ವೇಳೆ ಉಗ್ರರು ಕ್ಯಾಂಪ್‌ನೊಳಗೆ ನುಗ್ಗಿದ್ದಾರೆ. ಈ ವೇಳೆ ಅನುಮಾನಗೊಂಡ ಯೋಧರು ಕೂಡಲೆ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಉಗ್ರರು ಯೋಧರ ಕಣ್ಣಿಗೆ ಬಿದ್ದಿದ್ದು, ಕೂಡಲೆ ಗಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕ್ಯಾಂಪ್‌ ಹೊರಗಿನ ಬಂಕರ್‌ಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಯೋಧರೊಬ್ಬರ ಪುತ್ರಿ ಸೇರಿ ಮೂವರಿಗೆ ಗಾಯಗಳಾಗಿವೆ.
ಉಗ್ರರ ಪತ್ತೆಗಾಗಿ ಕೂಂಬಿಂಗ್‌ ಕಾರ್ಯಾಚರಣೆ ಚುರುಕುಗೊಂಡಿರುವುದಾಗಿ ಸೇನೆಯ ಮೂಲಗಳು ಹೇಳಿವೆ.
ಇನ್ನು ಈ ಕುರಿತು ಜಮ್ಮುಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು, ಉಗ್ರರ ಕೃತ್ಯವನ್ನು ಖಂಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com