ರಾಹುಲ್‌ ಗಾಂಧಿ ತಮ್ಮ Twitterನಲ್ಲಿ ತಾವೇ ಬರೆದು ಪೋಸ್ಟ್ ಮಾಡ್ತಾರೆ : ರಮ್ಯಾ

ಕಾಂಗ್ರೆಸ್‌ ಸಾಮಾಜಿಕ ಜಾಲತಾಣಗಳ ಅಧ್ಯಕ್ಷೆ , ಮಾಜಿ ಸಂಸದೆ ರಮ್ಯಾ ರಾಹುಲ್‌ ಗಾಂಧಿ ಬಗ್ಗೆ ಮಾಹಿತಿಯೊಂದನ್ನು ನೀಡಿದ್ದಾರೆ. ರಾಹುಲ್‌ ಗಾಂಧಿ ತಮ್ಮ ಟ್ವಿಟರ್‌ನಲ್ಲಿ ತಾವೇ ಸ್ವತಃ ಬರೆದು ಟ್ವೀಟ್ ಮಾಡುತ್ತಾರೆ ಎಂದಿದ್ದಾರೆ.

ರಮ್ಯಾ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಈ ವಿಷಯ ಪ್ರಸ್ತಾಪಿಸಿದ್ದಾರೆ. ಬಿಜೆಪಿಗಿಂತ ಕಾಂಗ್ರೆಸ್‌ ಬಳಿ ಕಡಿಮೆ ಸಂಪನ್ಮೂಲವಿದೆ. ಆದರೂ ನಮ್ಮ ತಂಡ ಚೆನ್ನಾಗಿಯೇ ಕೆಲಸ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯವಾಗಿದ್ದು, ಎಲ್ಲಾ ಸಂದರ್ಭದಲ್ಲೂ ಬಿಜೆಪಿಗಿಂತ ಮುಂದಿರುವುದಾಗಿ ಹೇಳಿದ್ದಾರೆ.ಇದೇ ರೀತಿ ಕೆಲಸ ಮಾಡಿದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿಯೂ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com