Cricket : ಮಳೆಯ ನಡುವೆ ಮಿಂಚಿದ ಆಫ್ರಿಕಾ : ಆತಿಥೇಯರಿಗೆ 5 ವಿಕೆಟ್ ಜಯ

ಜೋಹಾನೆಸ್ ಬರ್ಗ್ ನ ವಾಂಡರರ್ಸ್ ಮೈದಾನದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆತಿಥೇಯ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ಜಯ ಗಳಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಪ್ರಸಕ್ತ ಏಕದಿನ ಸರಣಿಯಲ್ಲಿ ತನ್ನ ಮೊದಲ ಗೆಲುವು ಪಡೆದಿದೆ.

ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 50 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿತು. ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಶತಕ ದಾಖಲಿಸಿದರು. 105 ಎಸೆತಗಳನ್ನು ಎದುರಿಸಿದ ಧವನ್ 109 ರನ್ ಬಾರಿಸಿದರು. ಅರ್ಧಶತಕ ಸಿಡಿಸಿದ ನಾಯಕ ವಿರಾಟ್ ಕೊಹ್ಲಿ 75 ರನ್ ಗಳಿಸಿದರು.

ಮಳೆ ಅಡ್ಡಿಪಡಿಸಿದ ಕಾರಣ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ 202 ರನ್ ಟಾರ್ಗೆಟ್ ನೀಡಲಾಯಿತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ 25.3 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿ ಜಯ ಸಾಧಿಸಿತು. ಮಿಂಚಿನ ಬ್ಯಾಟಿಂಗ್ ನಡೆಸಿ ಗೆಲುವಿಗೆ ಕಾರಣರಾದ ಹೆನ್ರಿಕ್ ಕ್ಲಾಸೆನ್ 27 ಎಸೆತಗಳಲ್ಲಿ 43 ರನ್ ಸಿಡಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com