Cricket : ಮಾಜಿ ನಾಯಕ ಅಜರುದ್ದೀನ್ ಹಿಂದಿಕ್ಕಿದ ಕ್ಯಾಪ್ಟನ್ Kohli

ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಮುರಿಯುತ್ತ ಸಾಗಿದ್ದಾರೆ. ಪ್ರಸಕ್ತ ಜಾಗತಿಕ ಕ್ರಿಕೆಟ್ ನಲ್ಲಿ ‘ ರನ್ ಮಷಿನ್ ‘ ಎಂದೇ ಕರೆಯಲ್ಪಡುವ ವಿರಾಟ್ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಭಾರತದ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಅವರನ್ನು ಹಿಂದಿಕ್ಕಿದ್ದಾರೆ. ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ರನ್ ಗಳಿಕೆಯಲ್ಲಿ ಅಜರುದ್ದೀನ್ ಅವರನ್ನು ಹಿಂದಿಕ್ಕಿದ್ದಾರೆ.

ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊಹಮ್ಮದ್ ಅಜರುದ್ದೀನ್ 9378 ರನ್ ಗಳಿಸಿದ್ದರೆ, ವಿರಾಟ್ ಕೊಹ್ಲಿ ಅವರ ಖಾತೆಯಲ್ಲಿ ಸದ್ಯ 9420 ರನ್ ಗಳಿವೆ. ಭಾರತದ ಪರವಾಗಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ 5ನೇ ಸ್ಥಾನದಲ್ಲಿದ್ದಾರೆ.

ಮೊದಲ ನಾಲ್ಕು ಸ್ಥಾನಗಳಲ್ಲಿ ಸಚಿನ್ ತೆಂಡೂಲ್ಕರ್ (18426), ಸೌರವ್ ಗಂಗೂಲಿ (11363), ರಾಹುಲ್ ದ್ರಾವಿಡ್ (10889), ಮಹೇಂದ್ರ ಸಿಂಗ್ ಧೋನಿ (9954) ಇದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com