BJPಯವರ ಸ್ಲಂ ವಾಸ ಬರೀ ನಾಟಕ, ವಾಸ ಮಾಡೋದಾದ್ರೆ ಗುಡಿಸ್ಲಲ್ಲಿ ಮಾಡ್ಲಿ : HDK

ಶಿವಮೊಗ್ಗ : ರಾಜ್ಯದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಿಯ ಪಕ್ಷಗಳ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿಗೆ ಮಾತ್ರ ಸೀಮಿತರಾಗಿದ್ದಾರೆ. ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಜನರನ್ನ ತಲುಪುವುದಕ್ಕಿಂತ ಮನ್ನ ಜೆಡಿಎಸ್ ತಲುಪಿದೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೀರಾವರಿ, ರೈತರ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಅದನ್ನ ಬಿಟ್ಟು ಬಿಜೆಪಿಯವರು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನ ನಾಯಕರು ಕೇವಲ‌ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ. ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬಳಿ ಸಾಲ ಮನ್ನ ವಿಚಾರ ಹೇಳಿಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಅಡಿಕೆ ಬೆಳಗಾರರ ಸಮಸ್ಯೆ ಹೆಚ್ಚಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕೆ ಬಂದ ಬಳಿಕ ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವ ಗೋಜಿಗೆ ಹೋಗಿಲ್ಲ. ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಮಾಡುತ್ತಿರುವುದು ನಾಟಕೀಯ. ವಾಸ್ತವ್ಯ ಮಾಡುವುದಾದರೆ ಸ್ಲಂನ ಗುಡಿಸಲು ಮನೆಯಲ್ಲಿ ವಾಸ್ತವ್ಯ ಮಾಡಬೇಕು. ಅದನ್ನ ಬಿಟ್ಟು 2 ಅಂತಸ್ತಿನ ಮನೆಯಲ್ಲಿ ವಾಸ್ತವ್ಯ ಮಾಡುವುದಲ್ಲ. ಬಿಜೆಪಿ ರಾಜ್ಯದಲ್ಲಿ 5 ವರ್ಷ ಅಧಿಕಾರ ಮಾಡಿದಾಗ ಸ್ಲಂ ಜನರ ಸಮಸ್ಯೆಗಳನ್ನ ಬಗೆಹರಿಸಿಲ್ಲ. ಆಗಿಲ್ಲದ ಯೋಚನೆ ಈಗ್ಯಾಕೆ ಎಂದಿದ್ದಾರೆ.

2 ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಜನ ಹಿತಕಾಪಡುವಲ್ಲಿ ವಿಫಲವಾಗಿದೆ. ಒತ್ತುವರಿ ವಿಚಾರದಲ್ಲಿ ಶ್ರೀಮಂತರಿಗೆ ಒಂದು ನ್ಯಾಯ ಬಡವರಿಗೆ ಒಂದು ನ್ಯಾಯ ಎಂಬಂತೆ ಮಾಡುತ್ತಿದ್ದಾರೆ. ತಲೆತಲಾಂತರಗಳಿಂದ ಭೂಮಿಯನ್ನ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರನ್ನ ಒಕ್ಕಲೆಬ್ಬಿಸುತ್ತಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ರಾಜ್ಯದಲ್ಲಿ ಜನರಿಂದ ಆಡಳಿತ ನಡೆಸುವ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈ ಬಾರಿ ರಾಜ್ಯದ ಜನತೆ ಜೆಡಿಎಸ್ ಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published.