ಮಂಡ್ಯ : ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನಿಸಿದ ಕಿಡಿಗೇಡಿಗಳು

ಮಂಡ್ಯ : ದುಷ್ಕರ್ಮಿಗಳಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನ ಮಾಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ದಲಿತ ಕಾಲೋನಿಯಲ್ಲಿ ಘಟನೆ ನಡೆದಿದೆ.

ಘಟನೆಯಿಂದ ದಲಿತರ ಕಾಲೋನಿಯಲ್ಲಿ ಉದ್ವಗ್ನ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿರೋ ಕಿಡಿಗೇಡಿಗಳ ಬಂಧನಕ್ಕೆ ದಲಿತ ಜನರು ಒತ್ತಾಯಪಡಿಸಿದ್ದಾರೆ.

ಸ್ಥಳಕ್ಕೆ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com