ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಕೆಮಿಕಲ್‌ ಕಾರ್ಖಾನೆ : ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

ಬೆಂಗಳೂರು : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೆಮಿಕಲ್ ಇದ್ದ ಇಡೀ ಕಾರ್ಖಾನೆ ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದಿದೆ.

ಇಲ್ಲಿನ ಲಿಯೋನಿಡ್ ಕೆಮಿಕಲ್ ಪಿ ವಿ ಲಿಮಿಟೆಡ್ ಕಂಪನಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಲಕ್ಷಾಂತರ ರೂ ಮೌಲ್ಯದ ಕೆಮಿಕಲ್ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿದೆ. ಎರಡು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ, ಸದ್ಯ ಶಿವರಾತ್ರಿ ಹಬ್ಬ ಇದ್ದರಿಂದ ಹೆಚ್ಚಿನ ಮಂದಿ ಕೆಲಸಕ್ಕೆ ಬಂದಿರದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com