Birthday Party ಯಲ್ಲಿ ಸ್ನೇಹಿತರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌

ಸೋನಾರ್ಪುರ್‌ : ಹುಟ್ಟುಹಬ್ಬದ ಪಾರ್ಟಿಯ ವೇಳೆ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದ ರತ್ನಾಲಾ ಪ್ರದೇಶದಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ನಾಲ್ಕನೇ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸಂತ್ರಸ್ತ ಯುವತಿಯನ್ನು ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆಯ ಬಾಯ್‌ಫ್ರೆಂಡ್‌ ತನ್ನ ಬರ್ತ್‌ ಡೇ ಪಾರ್ಟಿಗಾಗಿ ಆತನ ಮಾವನ ಮನೆಗೆ ಬಾಲಕಿಯನ್ನು ಕರೆದಿದ್ದ. ಬಾಲಕಿ ಮನೆಗೆ ಬಂದಾಗ ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಮಧ್ಯಪಾನ ಮಾಡುತ್ತಿದ್ದರು. ಬಳಿಕ ಯುವತಿಗೆ ಮತ್ತು ಬರುವ ಔಷಧಿ ಹಾಕಿ ಬಲವಂತವಾಗಿ ಕುಡಿಸಿದ್ದರು. ಆಕೆಗೆ ಪ್ರಜ್ಞೆ ತಪ್ಪಿತ್ತು. ಇದಾದ ಬಳಿಕ ಮೂವರೂ ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ಅತ್ಯಾಚಾರದ ಬಳಿಕ ಆಕೆಯನ್ನು ಹತ್ಯೆ ಮಾಡುವ ಪ್ರಯತ್ನ ಮಾಡಿದ್ದಾರೆ. ಅಷ್ಟರಲ್ಲಿ ಮನೆಯವರೆಲ್ಲ ವಾಪಸ್‌ ಬಂದಿದ್ದು, ಯುವತಿಗೆ ರಕ್ತಸ್ರಾವವಾಗುತ್ತಿದ್ದುದನ್ನು ನೋಡಿ, ಆಕೆಯ ಪೋಷಕರಿಗೆ ಫೋನ್‌ ಮಾಡಿದ್ದರು.ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೂ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುವ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com