ರಾಜ್ಯ ಬಜೆಟ್‌ -2018 : ಪತ್ರಕರ್ತರಿಗೂ ಪ್ರಾಮುಖ್ಯತೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ 13ನೇ ಬಜೆಟ್‌ನಲ್ಲಿ ಪತ್ರಕರ್ತರಿಗೆ ನೆರವು ಘೋಷಿಸಿದ್ದಾರೆ. ಅಪಘಾತ ಸಂದರ್ಭದಲ್ಲಿ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯಡಿ ಐದು ಲಕ್ಷ ರೂ ನೆರವು ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದರ ಜೊತೆಗೆ ಪತ್ರಿಕೆ ವಿತರಕರಿಗೆ ಪ್ರತ್ಯೇಕ ಕ್ಷೇಮ ನಿಧಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಮಾಧ್ಯಮ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೆರವು ನೀಡುವ ಭರವಸೆ ನೀಡಿದ್ದಾರೆ.

2018 -19ನೇ ಸಾಲಿನಲ್ಲಿ ಲಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಒಟ್ಟು 239 ಕೋಟಿ ರೂ ಮೀಸಲಿಟ್ಟಿದ್ದು, ಕಳೆದ ವರ್ಷ 5 ವರ್ಷಗಳಲ್ಲಿ ಪತ್ರಕರ್ತರಿಗೆ ನೀಡಲಾಗುವ ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಏರಿಸಲಾಗಿದೆ. ಪತ್ರಕರ್ತರ ಪಾಲಿನ ಶುಲ್ಕವನ್ನು ಇಲಾಖೆಯೇ ಭರಿಸಲಿದ್ದು. ಮಾನ್ಯತೆ ಪಡೆದ ಜಿಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್‌ ಪಾಸ್‌ ವಿತರಿಸುವ ಯೋಜನೆಯನ್ನು ಘೋಶಷಿಸಿದ್ದಾರೆ.

Leave a Reply

Your email address will not be published.