ಕನ್ನಡ ಚಿತ್ರರಂಗದ ಸಾರಥಿಗೆ 41ರ ಸಂಭ್ರಮ : ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ

ಬೆಂಗಳೂರು : ಬಾಕ್ಸ್‌ ಆಫೀಸ್‌ ಸುಲ್ತಾನ್‌ ಎಂದೇ ಕರೆಯಲ್ಪಡುವ ಡಿ ಬಾಸ್‌ ದರ್ಶನ್‌ 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದಲ್ಲಿರುವ ನಿವಾಸದಲ್ಲಿ ಅಭಿಮಾನಿಗಳ ಜೊತೆಗೆ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.

ಈ ಹಿಂದೆಯೇ ದರ್ಶನ್‌ ತಮ್ಮ ಅಭಿಮಾನಿಗಳಿಗೆ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ದರ್ಶನ್‌ಗೆ ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.

ಹೆಚ್ಚಿನ ಜನ ಸೇರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಮಾತನಾಡಿದ ದರ್ಶನ್‌, ಅಭಿಮಾನಿಗಳೇ ನನಗೆಲ್ಲಾ, ಸ್ನೇಹಿತರೆಲ್ಲ ದಿನಾ ಸಿಗುತ್ತಾರೆ. ಆದರೆ ಇಷ್ಟು ಜನ ಅಭಿಮಾನಿಗಳನ್ನು ಒಟ್ಟಿಗೆ ನೋಡುವುದು ನನ್ನ ಪುಣ್ಯ. ಇಂದು ಮಾತ್ರ ಅವರ ಜೊತೆಯೇ ಇರುತ್ತೇನೆ. ಇವರೆಲ್ಲದ ಅಭಿಮಾನಕ್ಕೆ ನಾನು ಋಣಿಯಾಗಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com