ಸುಪ್ರೀಂನಿಂದ ಕರ್ನಾಟಕ ಪರ ಕಾವೇರಿ ತೀರ್ಪು : ರಾಜ್ಯದಲ್ಲೆಡೆ ಸಿಹಿ ಹಂಚಿ ಸಂಭ್ರಮಾಚರಣೆ

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನಿಂದ ಅಂತಿಮ ತೀರ್ಪು ಹೊರಬಂದಿದ್ದು, ಕರ್ನಾಟಕ ನಿರಾಳವಾಗಿದೆ. 14.3 ಟಿಎಂಸಿ ನೀರು ರಾಜ್ಯಕ್ಕೆ ಉಳಿತಾಯವಾಗಲಿದ್ದು, ಬೆಂಗಳೂರಿಗೆ ಹೆಚ್ಚುವರಿ ನೀರು ಸಿಗಲಿದೆ.

ಸುಪ್ರೀಂಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದೆ. ಮಂಡ್ಯ ಸೇರಿದಂತೆ ಅನೇಕ ಭಾಗದ ರೈತರ ಮೊಗದಲ್ಲಿ ಸಂತೋಷ ಕಂಡು ಬಂದಿದ್ದು, ಎಲ್ಲೆಡೆ ಈ ಸಂಭ್ರಮವನ್ನು ಆಚರಿಸಲಾಗುತ್ತಿದೆ.

ಮೈಸೂರು , ಮಂಡ್ಯ, ಸೇರಿದಂತೆ ರಾಜ್ಯದ ಹಲವೆಡೆ ಕನ್ನಡ ಪರ ಕಾರ್ಯಕರ್ತರು, ಕಾವೇರಿ ಹೋರಾಟಗಾರರು ಸೇರಿದಂತೆ ಅನೇಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದಾರೆ.

ಮತ್ತೊಂದೆಡೆ ತನ್ನ ಪಾಲಿನ ನೀರು ಕಡಿಮೆಯಾಗಿದ್ದಕ್ಕೆ ತಮಿಳುನಾಡಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ತಮಿಳುನಾಡಿನ ರೈತರು ಪ್ರತಿಭಟನೆ ನಡೆಸುತ್ತಿದ್ದು ತೀರ್ಪಿನ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕಾವೇರಿ ತೀರ್ಪಿನ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಕರ್ನಾಟಕಕ್ಕೆ 14.3 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿಗೆ. ಇದರಿಂದಾಗಿ ರಾಜ್ಯಕ್ಕೆ ಅನುಕೂಲವಾಗಲಿದೆ. ವಿವರಗಳನ್ನು ನೋಡಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.