ಶಾಲೆಯಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ 6 ವರ್ಷದ ಬಾಲಕ

ವಿಜಯಪುರ : ಆರು ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ಸಿಂಧಗಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಪ್ರಕಾಶ್‌ಸಿಂಗ್‌ ಸಿದ್ದರಾಮಸಿಂಗ್‌ ಜಮಾದಾರ (6) ಎಂದು ಹೆಸರಿಸಲಾಗಿದೆ.

ಈತ ಸಿಂದಗಿಯ ಶಣ್ಮುಖೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದು, ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

ಆತನದ್ದು ಆತ್ಮಹತ್ಯಯೋ ಅಥವಾ ಯಾರಾದರು ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾರೋ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶಾಲೆಯ ಬೇಜವಾಬ್ದಾರಿಗೆ ಶಾಲೆ ಎದುರು ಮಗನ ಶವವಿಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com