ದ.ಕನ್ನಡ, ಶಿವಮೊಗ್ಗ, ಉ.ಕರ್ನಾಟಕದವರನ್ನು ಬಿಟ್ಟರೆ ಇನ್ಯಾರಿಗೂ ಕನ್ನಡ ಬರಲ್ಲ : ಅನಂತ್‌ ಹೆಗಡೆ

ಮಂಗಳೂರು: ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾನು ಶುದ್ಧ ಕನ್ನಡದಲ್ಲಿ ಮಾತನಾಡಿದ್ರೆ ಯಾರಿಗೂ ಅರ್ಥವಾಗಲ್ಲ. ಅದರಲ್ಲೂ ಬೆಂಗಳೂರಿಗರಿಗೆ ಶುದ್ಧ ಕನ್ನಡ ಅರ್ಥವಾಗುವುದೇ ಇಲ್ಲ.ಇತ್ತೀಚೆಗೆ ಕನ್ನಡ ಬರೆಯಲು ಯಾರಿಗೂ ಬರುತ್ತಿಲ್ಲ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಇಂಗ್ಲಿಷನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದು ಸವಾಲಾಗಿದೆ. ಕರ್ನಾಟಕದಲ್ಲಿ ಶುದ್ಧ ಕನ್ನಡ ಯಾರಲ್ಲೂ ಇಲ್ಲ. ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡದ ಹಳ್ಳಿಗರನ್ನು ಹೊರತುಪಡಿಸಿ ಇನ್ಯಾರಿಗೂ ಕನ್ನಡ ಬರುವುದಿಲ್ಲ. ಈ ಮೂರು ಜಿಲ್ಲೆಗಳನ್ನು ಹೊರತುಪಡಿಸಿದರೆ ಕನ್ನಡ ಮಾತನಾಡೋ ಯೋಗ್ಯತೆ ಯಾರಿಗೂ ಇಲ್ಲ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com