ರೈತ ಮುಖಂಡ ಕೆ.ಎಸ್ ಪುಟ್ಟಣ್ಣಯ್ಯ ಹೃದಯಾಘಾತದಿಂದ ವಿಧಿವಶ

ರೈತ ಮುಖಂಡ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುವ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.

ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಹೃದಯಾಘಾತ ಸಂಭವಿಸಿ ಚಿಕಿತ್ಸೆ ಫಲಕಾರಿಯಾಗದೆ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರೈತ ಮುಖಂಡ ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದ ಶಾಸಕ ಶಾಸಕರಾಗಿದ್ದರು. ಸರ್ವೋದಯ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Leave a Reply

Your email address will not be published.