ಯುವಕನ ಮೇಲೆ ಹಲ್ಲೆ ಪ್ರಕರಣ : ಮೊಹಮ್ಮದ್ ಹ್ಯಾರಿಸ್ 2 ದಿನಗಳ ಸಿಸಿಬಿ ವಶಕ್ಕೆ

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿ ಪುತ್ರ ಮೊಹಮ್ಮದ್ ನಲಪಾಡ್ ಅವರನ್ನು 2 ದಿನಗಳ ಕಾಲ ಸಿಸಿಬಿ ಪೋಲೀಸರ ವಶಕ್ಕೆ ಒಪ್ಪಿಸಲು 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ನಗರದ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಮೊಹಮ್ಮದ್ ಸೇರಿದಂತೆ 7 ಜನರನ್ನು ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಫೆಬ್ರವರಿ 21 ರವರೆಗೆ ಕಸ್ಟಡಿಯಲ್ಲಿರಿಸಿಕೊಂಡು ವಿಚಾರಣೆ ನಡೆಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಸೋಮವಾರ ಬೆಳಿಗ್ಗೆ ಆಟೋದಲ್ಲಿ ಬಂದ ಮೊಹಮ್ಮದ್ ಹ್ಯಾರಿಸ್ ತಾವಾಗಿಯೇ ಕಬ್ಬನ್ ಪಾರ್ಕ್ ಪೋಲೀಸ್ ಠಾಣೆಯಲ್ಲಿ ಶರಣಾಗಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com