ದಕ್ಷಿಣ ಕನ್ನಡ : ಕುಕ್ಕೆ ಸುಬ್ರಮಣ್ಯ ದೇವರ ದರ್ಶನ ಪಡೆದ ಅಮಿತ್ ಷಾ

ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಅಮಿತ್ ಷಾ ಕುಕ್ಕೆ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಬಳಿಕ ಅಮಿತ್ ಷಾ ಉಮಾಮಹೇಶ್ವರ ದೇವರ ದರ್ಶನ ಪಡೆದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ‌ಅಮಿತ್ ಶಾ ದೇವರ ದರ್ಶನ ತಡವಾಯಿತು. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಬೆಳಗ್ಗೆ 8 ಗಂಟೆಗೆ ನಿಗದಿಯಾಗಿತ್ತು. ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಷಾ ದೇವರ ದರ್ಶನಕ್ಕೆ ತಡವಾಗಿ ಬಂದರು.

ಸಂಪುಟ ನರಸಿಂಹ ದೇವರ ದರ್ಶನ ಪಡೆದ ಅಮಿತ್ ಷಾ ಬಳಿಕ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಜೊತೆ ಮಾತುಕತೆ ನಡೆಸಿದರು.

Leave a Reply

Your email address will not be published.

Social Media Auto Publish Powered By : XYZScripts.com