ತನ್ನ ಪ್ರೀತಿಯನ್ನು ನಿರಾಕರಿಸಿದ್ಲು ಅಂತ ಯುವತಿಗೆ ಚೂರಿ ಹಾಕೇ ಬಿಟ್ಟ ಪಾಗಲ್‌ ಪ್ರೇಮಿ

ಮಂಗಳೂರು : ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬ ನಡುರಸ್ತೆಯಲ್ಲೇ ಯುವತಿಗೆ ಚೂರಿ ಹಾಕಿ ಕೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೂಳ್ಯದಲ್ಲಿ ನಡೆದಿದೆ.

ಕೊಲೆಯಾದ ವಿದ್ಯಾರ್ಥಿನಿಯನ್ನು ಅಕ್ಷತಾ ಎಂದು ಹೆಸರಿಸಲಾಗಿದೆ. ಈಕೆ ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಕಾರ್ತಿಕ್‌ ಸಹ ಓದುತ್ತಿದ್ದು, ಆಕೆಯ ಬಳಿ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ ಆಕೆ ಒಪ್ಪದ ಹಿನ್ನೆಲೆಯಲ್ಲಿ ಸೂಳ್ಯದ ರಥಬೀದಿಯಲ್ಲಿ ಆರು ಬಾರಿ ಚೂರಿ ಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಆತನೂ ಚೂರಿಯಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೂಡಲೆ ಸ್ಥಳೀಯರು ಆತನನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೂಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.