ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂದು ಕೇಸರಿ ಪಡೆಯೇ ಹೇಳುತ್ತದೆ : ಸಾದ್ವಿ ಪ್ರಜ್ಞಾ

ಔರಂಗಾಬಾದ್‌ : ದೇಶದ ಒಳಿತು ನಮಗೆ ಮುಖ್ಯ. ದೇಶದ ಒಳಿತಿಗಾಗಿ ಹಿಂದೂಗಳು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸಾದ್ವಿ ಪ್ರಜ್ಞಾ ಸಿಂಗ್‌ ಕರೆ ನೀಡಿದ್ದಾರೆ.

ಔರಂಗಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದೂಗಳು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಬಿಜೆಪಿ ಹೇಳುತ್ತದೆ. ಇದನ್ನು ನಾನು ಹೇಳುವ ಅಗತ್ಯವಿಲ್ಲ. ಆದರೆ ಎಲ್ಲಾ ಹಿಂದೂಗಳೂ ಈ ಬಗ್ಗೆ ಯೋಚನೆ ಮಾಡಿ ಎಂದಿದ್ದಾರೆ.

ನಾನು ಕೇಸರಿ ಭಯೋತ್ಪಾದನೆ ಮಾಡುತ್ತಿಲ್ಲ. ನನ್ನ ವಿರುದ್ದ ಪಿತೂರಿ ನಡೆಯುತ್ತಿದೆ. ಈ ಮೂಲಕ ದೇಶದ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುವ ಕೆಲಸ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಂತಹ ಎಲ್ಲಾ ಸಂಚುಗಳನ್ನು ತಡೆಯಬೇಕು. ಅದಕ್ಕೆ ನಾನು ರಾಜಕೀಯ ಪ್ರವೇಶಿಸುತ್ತೇನೆ. ದೇಶ ಸೇವೆಗೆ ನಾನು ಸದಾ ಸಿದ್ಧವಾಗಿದ್ದೇನೆ ಎಂದಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com