ಸಮವಸ್ತ್ರದ ಅಳತೆ ತಗೋಬೇಕು ಎಂದ ಶಿಕ್ಷಕ, ಬಳಿಕ ವಿದ್ಯಾರ್ಥಿ ಬಟ್ಟೆ ಬಿಚ್ಚಿಸಿದ….!!

ಲಖನೌ : ಉತ್ತರ ಪ್ರದೇಶದ ಕನೌಜ್ನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿ ಬಳಿ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.
ಜಲಾಲ್ಪುರ ಖತರಿ ಬಂಗೇರ್ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿದ್ದಾರೆ. ಹೊಸ ಸಮವಸ್ತ್ರಕ್ಕೆಂದು ಅಳತೆ ತೆಗೆದುಕೊಳ್ಳುವ ವೇಳೆ 8ನೇ ತರಗತಿಯ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿರುವ ವಿಚಾರ ಈಗ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.
ವಿಷಯ ತಿಳಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಿಕ್ಷಕನನ್ನು ಬಂಧಿಸಿದ್ದಾರೆ. ಶಾಲೆಯ ಉಳಿದ ವಿದ್ಯಾರ್ಥಿಗಳು ಈ ಬಗ್ಗೆ ಪೋಷಕರಲ್ಲಿ ಹೇಳಿದ ಬಳಿಕ ಪ್ರಕರಣ ಬಯಲಿಗೆ ಬಂದಿದೆ. ಅಲ್ಲದೆ ಶಿಕ್ಷಕನ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು,ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com